Publish Date: Thu, 06 Apr 2023 (15:27 IST)
Updated Date: Thu, 06 Apr 2023 (15:31 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷ ಅಂದ್ರೆ ಎರಡನೇ ಪಟ್ಟಿಯಲ್ಲಿ ವಲಸಿಗರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಆದ್ರೆ, ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಉಳಿದಿದೆ. ಪ್ರಮುಖವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರಿಗೆ ಕೊಕ್ ನೀಡಲಾಗಿದೆ. ದತ್ತಾ ಅವರ ಬದಲಿಗೆ ಆನಂದ್ ಕೆ.ಎಸ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಅಚ್ಚರಿಗೆ ಕಾರಣವಾಗಿದೆ. ಕಳೆದ ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಬಾಕಿ ಇದ್ದ 100 ಕ್ಷೇತ್ರಗಳ ಪೈಕಿ 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 52 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ.