Select Your Language

Notifications

webdunia
webdunia
webdunia
webdunia

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಸಮಯ, ಲಿಂಕ್ ಮಾಹಿತಿಗೆ ಇಲ್ಲಿ ನೋಡಿ

Students

Krishnaveni K

ಬೆಂಗಳೂರು , ಬುಧವಾರ, 10 ಏಪ್ರಿಲ್ 2024 (08:58 IST)
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 11 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ವಿಜ್ಞಾನ, ವಾಣಿಜ್ಯ, ಕಲೆ ವಿಭಾಗಗಳಿಗೆ ಪರೀಕ್ಷೆ ನಡೆದಿತ್ತು. ಈ ಎಲ್ಲಾ ವಿಭಾಗಗಳ ಪರೀಕ್ಷೆ ಫಲಿತಾಂಶ ಏಕಕಾಲಕ್ಕೆ ಇಂದು ಪ್ರಕಟವಾಗಲಿದೆ. ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಮುಕ್ತಾಯವಾಗಿದ್ದು, ಇಂದು ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ.

ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಕಡ್ಡಾಯವಾಗಿರಬೇಕಾಗುತ್ತದೆ. https://karresults.nic.in/ ಅಥವಾ https://pue.kar.nic/ ಎಂಬ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮುಖಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ಜೊತೆಗೆ ಯಾವ ವಿಭಾಗ ಎಂದು ಸೆಲೆಕ್ಟ್ ಮಾಡಬೇಕಾಗುತ್ತದೆ.

ಕ್ಲಿಕ್ ಮಾಡಿದಾಗ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸಲಿದೆ. ಈ ಫಲಿತಾಂಶವನ್ನು ನೀವು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಸುಮಾರು 6.9 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಅವಧಿಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆ: ಡಾ.ಮಂಜುನಾಥ್