Select Your Language

Notifications

webdunia
webdunia
webdunia
webdunia

ಭಾರತೀಯರಿಗೆ 3,000 ವೀಸಾ: ರಿಷಿ ಸುನಕ್

ಭಾರತೀಯರಿಗೆ 3,000 ವೀಸಾ: ರಿಷಿ ಸುನಕ್
dehali , ಗುರುವಾರ, 17 ನವೆಂಬರ್ 2022 (17:05 IST)
ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಇಂದು ಯುಕೆ-ಭಾರತ ಯುವ ವೃತ್ತಿಪರರ ಯೋಜನೆಯನ್ನು ದೃಢೀಕರಿಸಲಾಗಿದೆ. 18-30 ವರ್ಷ ವಯಸ್ಸಿನ ಪದವಿ-ಶಿಕ್ಷಿತ ಭಾರತೀಯ ಪ್ರಜೆಗಳಿಗೆ ಯುಕೆಗೆ ಬರಲು ಮತ್ತು ಎರಡು ವರ್ಷಗಳವರೆಗೆ ಕೆಲಸ ಮಾಡಲು 3,000 ವೀಸಾಗಳನ್ನು ನೀಡುತ್ತದೆ ಎಂದು ಯುಕೆ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. 17ನೇ ಆವೃತ್ತಿಯ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಸುನಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ಡೌನಿಂಗ್ ಸ್ಟ್ರೀಟ್ ರೀಡೌಟ್‌ನಲ್ಲಿ ಈ ಪ್ರಕಟಣೆ ಹೊರಬಿದ್ದಿದೆ. ಕಳೆದ ತಿಂಗಳು ಭಾರತೀಯ ಮೂಲದ ವ್ಯಕ್ತಿಯೊಬ್ಬರು ಬ್ರಿಟಿಷ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಸಭೆಯಾಗಿದೆ. ಈ ಯೋಜನೆಯು ಭಾರತದೊಂದಿಗಿನ ನಮ್ಮ ದ್ವಿಪಕ್ಷೀಯ ಸಂಬಂಧ ಮತ್ತು ಎರಡೂ ದೇಶಗಳ ಆರ್ಥಿಕತೆಯನ್ನು ಬಲಪಡಿಸಲು ಸಹಕಾರಿಯಾಗಿದೆ. ಇಂಡೋ-ಫೆಸಿಫಿಕ್ ಪ್ರದೇಶದೊಂದಿಗೆ ಬಲವಾದ ಸಂಪರ್ಕಗಳನ್ನು ರೂಪಿಸುವ UKಯ ಬದ್ಧತೆಗೆ ಮಹತ್ವದ ಸಾಕ್ಷಿಯಾಗಲಿದೆ ಎಂದು ಡೌನಿಂಗ್ ಸ್ಟ್ರೀಟ್ ಹೇಳಿಕೆಯಲ್ಲಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯರಿಗೆ ಬಿರಿಯಾನಿ ನೀಡಿದ ಪಾಕಿಸ್ತಾನಿ