Publish Date: Mon, 10 Oct 2022 (14:21 IST)
Updated Date: Mon, 10 Oct 2022 (16:23 IST)
ಬೆಳಗಾವಿ : ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ರೂ. ನೀಡಿದ್ದು, ಕೆಲಸ ಪ್ರಾರಂಭ ಮಾಡಬೇಕು.
ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಮಹಾರಾಷ್ಟ್ರದ ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,
ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕೊಲ್ಲಾಪುರದ ಕನ್ನೇರಿಮಠ ಮಾಡ್ತಿದೆ. ಹೀಗಾಗಿ ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಹಣವನ್ನು ಕೊಡಲಾಗುತ್ತಿದೆ ಎಂದು ಹೇಳಿದರು.