Select Your Language

Notifications

webdunia
webdunia
webdunia
webdunia

3 ದಿನ ಶಾಲೆ – ಕಾಲೇಜ್ ಗಳಿಗೆ ರಜೆ : ಡಿಸಿ ಆದೇಶ

3 ದಿನ ಶಾಲೆ – ಕಾಲೇಜ್ ಗಳಿಗೆ ರಜೆ : ಡಿಸಿ ಆದೇಶ
ಕಲಬುರಗಿ , ಮಂಗಳವಾರ, 4 ಫೆಬ್ರವರಿ 2020 (12:21 IST)
ಈ ಜಿಲ್ಲೆಯ ಎಲ್ಲಾ ಶಾಲೆ – ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮೂರು ದಿನಗಳ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಮಕ್ಕಳು ಈ ಸಮ್ಮೇಳನದಲ್ಲಿ ಭಾಗವಹಿಸಬೇಕು.

ಈ ಉದ್ದೇಶದಿಂದ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಫೆಬ್ರವರಿ 5 ರಿಂದ 7ರವರೆಗೆ ಮೂರು ದಿನಗಳ ಕಾಲ ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಲಾಗಿದೆ ಅಂತ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ: ಬಿಜೆಪಿಯಲ್ಲಿ ಶುರುವಾಯ್ತು ಭಾರೀ ಬಂಡಾಯ