Publish Date: Sun, 12 Mar 2023 (09:46 IST)
Updated Date: Sun, 12 Mar 2023 (02:36 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಮಾರ್ಚ್ 9, 10 ಮತ್ತು 11 ರಂದು ಒಟ್ಟು ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ.
ನಿಯೋಗದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಆಗಮಿಸಲಿದ್ದಾರೆ.
ಮೊದಲ ದಿನ ಅಪರಾಹ್ನ ಬೆಂಗಳೂರಿಗೆ ಆಗಮಿಸುವ ನಿಯೋಗವು ಮೊದಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಲಿದೆ.
Ramya kosira
Publish Date: Sun, 12 Mar 2023 (09:46 IST)
Updated Date: Sun, 12 Mar 2023 (02:36 IST)