Select Your Language

Notifications

webdunia
webdunia
webdunia
webdunia

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಆತ್ಮಾಹುತಿ ದಾಳಿ: 3 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಆತ್ಮಾಹುತಿ ದಾಳಿ: 3 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
bengaluru , ಭಾನುವಾರ, 5 ಸೆಪ್ಟಂಬರ್ 2021 (13:53 IST)
ಪಾಕಿಸ್ತಾನದ ಕ್ವೆಟ್ಟಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಮೋಟಾರು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಅನ್ನು ಸ್ಫೋಟಿಸಿದ್ದಾರೆ. ಈ ದಾಳಿಯನ್ನು ತೆಹರಿಕ್ ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ದಾಳಿ ನಡೆಸಿದೆ ಎಂದು ಪಾಕಿಸ್ತಾನ ಆರೋಪಿಸಿದೆ.

ಕ್ವೆಟ್ಟಾದ ಸಮೀಪವಿರುವ ಮಿಯಾನ್ ಗುಂಡಿಯಲ್ಲಿ ಈ ದಾಳಿ ನಡೆದಿದ್ದು, ಪ್ಯಾರಾ ಮಿಲಿಟರಿ ಪಡೆಯ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದು ಆಫ್ಘಾನಿಸ್ತಾನ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು ತರಕಾರಿ ಬೆಳೆಯುವುದರಲ್ಲಿ ಖ್ಯಾತಿ ಪಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ನಿಫಾ ಸೋಂಕಿಗೆ ಬಾಲಕ ಬಲಿ