ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್ : ನಿಖಿಲ್ ಕುಮಾರಸ್ವಾಮಿ

Webdunia
ಶನಿವಾರ, 11 ಜೂನ್ 2022 (10:39 IST)
ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ ಯುವಕರಿಗೆ 30% ಸೀಟು ಮೀಸಲು ಇಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದರು.

ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,

ಸಂಘಟನೆ ಮಾಡೋ ಯುವಕರಿಗೆ ಟಿಕೆಟ್ ಕೊಡುವುದಾಗಿ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಯುವಕರು ಅಧಿಕಾರದ ಆಸೆ ಬಿಟ್ಟು ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ಕೊಟ್ಟರು. 

ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು. ಹಿರಿಯರು ಹಲವಾರು ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಯುವ ಘಟಕವನ್ನು ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಬಲ ಪಡಿಸಲಾಗುವುದು.

ರಾಜ್ಯ ಸರ್ಕಾರದ ವೈಫಲ್ಯ, ನಿರುದ್ಯೋಗ ಸಮಸ್ಯೆ ಸೇರಿದಂತೆ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಯುವಜನತಾದಳ ಸಂಘಟನೆಗೆ ಸಜ್ಜಾಗುತ್ತಿದೆ. ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಇದರಿಂದ ನಮ್ಮ ಪಕ್ಷದ ಅಡಿಪಾಯ ಭದ್ರವಾಗಿದೆ ಎಂಬುದು ಗೊತ್ತಾಗುತ್ತಿದೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments