Webdunia - Bharat's app for daily news and videos

Install App

ಜಲಮಂಡಳಿಗೆ ಜಪಾನ್ ಸಂಸ್ಥೆಯಿಂದ 32,391 ಕೋಟಿ ಸಾಲ ಮಂಜೂರು

Webdunia
ಶುಕ್ರವಾರ, 1 ಏಪ್ರಿಲ್ 2022 (20:05 IST)
ಬೆಂಗಳೂರು: ನಗರದಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕೈಗೊಳ್ಳಲು ಜಪಾನ್ ಇಂಟರ್ ನ್ಯಾಷನಲ್ ಕಾರ್ಪೋರೇಷನ್ ಏಜೆನ್ಸಿ (ಜೈಕಾ) ಜಲಮಂಡಳಿಗೆ 32,391 ಕೋಟಿ ಸಾಲ ಮಂಜೂರು ಮಾಡಿದೆ ಎಂದು ಬಿ. ಡಬ್ಲ್ಯೂ. ಎಸ್.ಎಸ್.ಬಿ ಪತ್ರಿಕಾ ಪ್ರಕಣೆಯಲ್ಲಿ ಮಾಹಿತಿ ನೀಡಿದೆ.
 
ಇದಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಲ ಮಂಡಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ನಗರದ ಮೂರನೇ ಹಂತದ ಕುಡಿಯುವ ನೀರು ಯೋಜನೆಗೆ ಈ ಸಾಲ ನೀಡಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೂ ನೀರು ಪೂರೈಕೆಗೆ ಹಣ ವಿನಿಯೋಗಿಸಲು ಉದ್ದೇಶಿಸಲಾಗಿದೆ ನೀರು ಸರಬರಾಜು ಮಂಡಳಿ ಹೇಳಿದೆ.
 
ಈ ಯೋಜನೆ ಅಡಿ ಪಾಲಿಕೆ ವ್ಯಾಪ್ತಿಯಲ್ಲಿ ಸುರಕ್ಷಿತ ಮತ್ತು ಸುಸ್ಥಿರವಾದ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆ ಮತ್ತು ನೀರು ಶುದ್ದೀಕರಣ ಘಟಕಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಯಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ 110 ಗ್ರಾಮಗಳೂ ಸೇರಿದ್ದು, ಇದರಿಂದ ಸುಮಾರು 35 ಲಕ್ಷ ಜನರಿಗೆಅನುಕೂಲವಾಗಲಿದೆ ಎಂದು ತಿಳಿಸಿದೆ.
 
ಈ ಯೋಜನೆಯಿಂದಾಗಿ ನಗರದ ನಾಗರಿಕರ ಜೀವನ ಮಟ್ಟವನ್ನು ಸುಧಾರಣೆ ಮಾಡುವ ಜತೆಗೆ, ಬಿಬಿಎಂಪಿ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ವಾತಾವರಣವನ್ನು ಉತ್ತೇಜನ ದೊರೆತಂತಾಗುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
 
ಜಲಮಂಡಳಿಗೆ ಬಿಗ್ ರಿಲೀಫ್:
 
 ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ಹೊಸ ಕಾಮಗಾರಿಗಳಿಗೆ ಹಣದ ಕೊರತೆ ಎದುರಿಸುತ್ತಿರುವ ಜಲಮಂಡಳಿಗೆ ಸಾಲ ಮಂಜೂರಾಗಿರುವುದು ಬಿಗ್ ರಿಲೀಫ್ ನೀಡಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ