Select Your Language

Notifications

webdunia
webdunia
webdunia
webdunia

34 ಕೊರೊನಾ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ

34 ಕೊರೊನಾ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ವಿಜಯಪುರ , ಮಂಗಳವಾರ, 12 ಮೇ 2020 (19:06 IST)
ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, ಸಧ್ಯಕ್ಕೆ 13 ರೋಗಿಗಳು ಮಾತ್ರ ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಪರಿಣಾಮಕಾರಿಯಾದ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

ಈವರೆಗೆ 50 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2,175 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ.

736 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 1403 ಜನರು (1 ರಿಂದ 28 ದಿನಗಳ) ರಿರ್ಪೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ಮೂರು ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾ. ಮಣಿವಣ್ಣನ್ ವರ್ಗಾವಣೆ : ಸಚಿವ ಹೀಗೆ ಹೇಳೋದಾ