Select Your Language

Notifications

webdunia
webdunia
webdunia
webdunia

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ನೋಟಿಸ್, ಯಾವಾ ಪ್ರಕರಣ ಗೊತ್ತಾ

Mahesh Shetty Timarody

Sampriya

ಬೆಳ್ತಂಗಡಿ , ಶುಕ್ರವಾರ, 26 ಸೆಪ್ಟಂಬರ್ 2025 (16:12 IST)
ಬೆಳ್ತಂಗಡಿ : ಅಕ್ರಮವಾಗಿ ತಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದ ಎರಡು ತಲವಾರು ಹಾಗೂ ಒಂದು ಬಂದೂಕು ಪತ್ತೆ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿಗೆ ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್‌ ಅನ್ನು ನೀಡಲಾಗಿದೆ. 

ಈ ಪ್ರಕರಣ ಸಂಬಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ.

 ಸೆ.29 ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ಅನ್ನು ತಿಮರೋಡಿ ಅವರ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಜಾಮೀನಿಗಾಗಿ ಮಂಗಳೂರಿನ ಸೆಷನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಸೆ27ರಂದು ನಡೆಯಲಿದೆ. ಇಲ್ಲಿ ಅವರಿಗೆ ನಿರೀಕ್ಷಣಾ ಜಾಮೀನಿನ ಮೇಲೆ ತೀರ್ಪು ಬರುವವರೆಗೆ ಅವರು ಠಾಣೆಗೆ ಹಾಜರಾಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾದ ಮೇಲೆ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗೊಇದೆ. 

ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಜಿಲ್ಲೆಯಿಂದ ಗಡಿಪಾರು ಆದೇಶ ಮತ್ತಷ್ಟು ತೊಂದರೆಗೆ ಸಿಲುಕಿದಂತಾಗಿದೆ. 

ಗಡಿಪಾರು ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಹೋಗುವ ಅವಕಾಶವಿದ್ದು, ಈ ಬಗ್ಗೆಯೂ ಪ್ರಯತ್ನಗಳು ನಡೆಯುತ್ತಿರುವುದಾಗಿ ಮಾಹಿತಿಗಳು ಲಭಿಸುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಜಾತಿ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆ ಹೈಲೈಟ್ಸ್