Select Your Language

Notifications

webdunia
webdunia
webdunia
webdunia

ವಿದ್ಯುತ್ ತಂತಿ ಸ್ಪರ್ಶಿಸಿ ಕೊಡಗಿನಲ್ಲಿ 4 ಕಾಡಾನೆಗಳ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಕೊಡಗಿನಲ್ಲಿ 4  ಕಾಡಾನೆಗಳ ಸಾವು
ಕೊಡಗು , ಮಂಗಳವಾರ, 27 ಜೂನ್ 2017 (16:09 IST)
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 4 ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ನಡೆದಿದೆ.

ಜೂನ್ 14ರಂದೂ ಸಹ 2 ಕಾಡಾನೆಗಳು ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದವು. ಇದಾದ ಬಳಿಕವೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ 15 ದಿನಗಳ ಅಂತರದಲ್ಲಿ 6 ಕಾಡಾನೆಗಳು ವಿದ್ಯುತ್ ತಂತಿ ತಾಗಿ ಮೃತಪಟ್ಟಿವೆ.

ಕಳೆದ ಕೆಲ ದಿನಗಳಿಂದ ವಿರಾಜಪೇಟೆಯಲ್ಲಿ ಮಳೆ ಸುರಿಯುತ್ತಿದ್ದು, ಬಿರುಗಾಳಿ ಅಬ್ಬರಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನ ತುಳಿದ 4 ಆನೆಗಳು ಮೃತಪಟ್ಟಿವೆ. 32, 25, 6 ಮತ್ತು 7 ವರ್ಷದ ಆನೆಗಳು ಅಸುನೀಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ವಿಶ್ವನಿದ್ಯಾಲಯಕ್ಕೆ ಕೆಂಪೇಗೌಡರ ಹೆಸರು: ಸಿಎಂ