4 ತಿಂಗಳ ಗರ್ಭಿಣಿ ಪತ್ನಿಗೆ ದುರುಳ ಪತಿಯೊಬ್ಬ ಬೆಂಕಿ ಹಚ್ಚಿ ಹತ್ಯೆಗೈಯ್ಯಲು ಯತ್ನಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಕುಂಚಿಕೋರ್ವ ಓಣಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ಪರಸಪ್ಪ ಪತ್ನಿ ಯಲ್ಲವ್ವನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ದಂಪತಿಗಳ ನಡುವಿನ ಮನಸ್ತಾಪವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಗಂಭೀರವಾಗಿ ಗಾಯಗೊಂಡಿರುವ ಪೀಡಿತೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗೋಲ್‌ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.