ಬಿಎಂಟಿಸಿ ಬಸ್ ಹರಿದು 4ರ ಬಾಲಕಿ ಸಾವು

Webdunia
ಗುರುವಾರ, 17 ಆಗಸ್ಟ್ 2023 (10:12 IST)
ಬೆಂಗಳೂರು : ಶಾಲೆಗೆ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ ಹರಿದು ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯ ಬಳಿ ನಡೆದಿದೆ.
 
ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ಘಟನೆ ನಡೆದಿದ್ದು, ನಾಲ್ಕೂವರೆ ವರ್ಷದ ಪೂರ್ವಿ ರಾವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಂದೆ ಪ್ರಸನ್ನ ಮಗಳು ಪೂರ್ವಿಯನ್ನು ಶಾಲೆಗೆ ಬಿಡಲು ಬೈಕ್ನಲ್ಲಿ ಕರೆದೊಯ್ಯುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ತಂದೆ ಪ್ರಸನ್ನ ಬೈಕ್ನ ಎಡಬದಿಗೆ ಬಿದ್ದಿದ್ದಾರೆ. ಪೂರ್ವಿ ಬಲಬದಿಗೆ ಬಿದ್ದಿದ್ದು, ಈ ವೇಳೆ ಆಕೆಯ ಮೇಲೆ ಬಿಎಂಟಿಸಿ ಬಸ್ ಹರಿದು ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಪೂರ್ವಿ ಖಾಸಗಿ ಶಾಲೆಯೊಂದರಲ್ಲಿ ಪ್ರೀ ಕೆಜಿ ಓದುತ್ತಿದ್ದು, ತಂದೆ ಪ್ರಸನ್ನ ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗ ಹೊಂದಿದ್ದಾರೆ. ಪ್ರಸನ್ನ ಪ್ರತಿನಿತ್ಯ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಕೆಲಸಕ್ಕೆ ತೆರಳುತ್ತಿದ್ದರು. ಇಂದು ಸಹಾ ಮಗಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ವೇಳೆ ಅಪಘಾತವಾಗಿ ದುರ್ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments