434 ಗಣ್ಯರಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದ ಆಪ್ ನೇತೃತ್ವದ ಪಂಜಾಬ್ ಸರಕಾರವನ್ನು ಪಂಜಾಬ್-ಹರಿಯಾಣ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಭಗವತ್ ಮನ್ ರಾಜ್ಯದ 434 ಗಣ್ಯರಿಗೆ ನೀಡಲಾಗಿದ್ದ ಭದ್ರತೆಯನ್ನು ವಾಪಸ್ ಪಡೆದಿದ್ದರು. ಅಲ್ಲದೇ ಭದ್ರತೆ ವಾಪಸ್ ಪಡೆದ ಗಣ್ಯರ ಪಟ್ಟಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗಿತ್ತು.
ಭದ್ರತೆ ವಾಪಸ್ ಪಡೆದ ಮಾರನೇ ದಿನವೇ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಈ ಘಟನೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
ಗಣ್ಯರಿಗೆ ನೀಡಲಾದ ಭದ್ರತೆ ವಾಪಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪಂಜಾಬ್ ಸರಕಾರದ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಜೂನ್ 7ರೊಳಗಾಗಿ ಹಿಂಪಡೆದ ಎಲ್ಲಾ ಗಣ್ಯರಿಗೆ ಮರು ಭದ್ರತೆ ಒದಗಿಸುವಂತೆ ಸೂಚಿಸಿದೆ.