Publish Date: Wed, 12 Jun 2019 (20:44 IST)
Updated Date: Wed, 12 Jun 2019 (20:45 IST)
ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 45 ಜನರನ್ನು ಬಂಧನ ಮಾಡಿದ್ದಾರೆ. ಪಣಕ್ಕಿಟ್ಟಿದ್ದ 3.17 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಎಮ್ಮೇರಹಳ್ಳಿ ಸಮೀಪ ಈ ದಾಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಜೂಜಾಡುತ್ತಿದ್ದ ಜನರನ್ನು ಬಂಧನ ಮಾಡಿದ್ದಾರೆ.
ಈ ಸಂಬಂಧ ಸಿರಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ.