Select Your Language

Notifications

webdunia
webdunia
webdunia
webdunia

ಕೊಡಗು ಜಿಲ್ಲೆಯಲ್ಲಿ 478 ಹೊಸ ಕೋವಿಡ್ ಪ್ರಕರಣ ಪತ್ತೆ

478 new Kovid cases
bangalore , ಗುರುವಾರ, 3 ಫೆಬ್ರವರಿ 2022 (22:01 IST)
ಕೊಡಗು ಜಿಲ್ಲೆಯಲ್ಲಿ ಗುರುವಾರ 478 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 147, ಸೋಮವಾರಪೇಟೆ ತಾಲೂಕಿನಲ್ಲಿ 194 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 137ಹೊಸ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 45,505ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 746ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 41,725 ಮಂದಿ ಸೋಂಕು ಮುಕ್ತರಾದಂತಾಗಿದೆ. ಸತ್ತವರ ಸಂಖ್ಯೆ 443ಕ್ಕೆ‌ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಪ್ರಸಕ್ತ3337 ಸಕ್ರಿಯ ಪ್ರಕರಣ, 245ಕಂಟೈನ್ ಮೆಂಟ್ ವಲಯ ಹಾಗೂ ಕೋವಿಡ್ ಪಾಸಿಟಿವಿಟಿ ದರ19.40ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಣ ಸಂಸ್ಥೆಗಳು ಮಕ್ಕಳಲ್ಲಿ ರಾಷ್ಟ್ರೀಯ ಭಾವನೆ ಬೆಳೆಸುವ ಕೇಂದ್ರಗಳಾಗಬೇಕು: ಗೃಹ ಸಚಿವ