ಲೋಕಸಭೆ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟು 5.33 ಕೋಟಿ ಮತದಾರರಿದ್ದಾರೆ.
ಈ ನಡುವೆ, ಮತದಾರರು ತಮ್ಮ ಗುರುತಿನ ಚೀಟಿಯಲ್ಲಿ ತಪ್ಪುಗಳಿದ್ದಲ್ಲಿ ಸರಿಪಡಿಸಲು ಅವಕಾಶ ನೀಡಲಾಗಿದ್ದು, ಶುಕ್ರವಾರದಿಂದ ಡಿ.9 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಅಂತಿಮ ಮತದಾರರ ಪಟ್ಟಿಯನ್ನು 2024ರ ಜ.5ರಂದು ಪ್ರಕಟಿಸಲಾಗುವುದು ಅಂತಾ ಅಧಿಕಾರಿಗಳು ಹೇಳಿದ್ದಾರೆ.