Publish Date: Tue, 21 Jun 2022 (21:23 IST)
Updated Date: Tue, 21 Jun 2022 (21:27 IST)
ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.