Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ

ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ
ಬೆಂಗಳೂರು , ಭಾನುವಾರ, 6 ಫೆಬ್ರವರಿ 2022 (14:15 IST)
ಒಂದೇ ಕುಟುಂಬದ ಐದು ಮಂದಿಯನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.
 
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಸಮೀಪದ ಬಜಾರ್ ಲೈನ್ ನಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಲಾಗಿದೆ.
ಬಜಾರ್ ಲೈನ್ ನಿವಾಸಿಗಳಾದ ಲಕ್ಷ್ಮಿ (26), ರಾಜು (12), ಕೋಮಲ್ (7), ಕುನಾಲ್ (4), ಗೋವಿಂದ (8) ಕೊಲೆಯಾದವರು.
 
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಯತೀಶ್ ಸೇರಿದಂತೆ ಪೊಲೀಸರ ದೌಡಾಯಿಸಿದ್ದು, ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
 
ಕೆಆರ್‌ಎಸ್‌ನ ಗಂಗರಾಮ್ ಹಾಗೂ ಆತನ ಅಣ್ಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೋಗಿ ವ್ಯಾಪಾರ ಮಾಡುತ್ತಾರಂತೆ. ಒಮ್ಮೆ ವ್ಯಾಪಾರಕ್ಕೆಂದು ಮನೆಯಿಂದ ಹೋದ್ರೆ ಹದಿನೈದರಿಂದ ಒಂದು ತಿಂಗಳು ವಾಪಸ್ ಬರುವುದಿಲ್ಲ.
 
ಗಂಗರಾಜ್ ಎರಡು ದಿನದ ಹಿಂದೆ ವ್ಯಾಪಾಕ್ಕೆಂದು ಮನೆಯಿಂದ ಹೋಗಿದ್ರು. ಹೀಗಾಗಿ ಲಕ್ಷ್ಮೀ ಮಕ್ಕಳನ್ನು ನೋಡಿಕೊಂಡು ಮನೆಯಲ್ಲೇ ಇದ್ರು. ರಾತ್ರಿ ಎಲ್ಲರೂ ಮಲಗಿದ ಬಳಿಕ ಮನೆಗೆ ನುಗ್ಗಿರುವ ಹಂತಕರು ಹರಿತವಾದ ಮಾರಕಾಸ್ತ್ರಗಳಿಂದ ಐವರನ್ನು ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ 5G ಸೇವೆ