Daily Horoscope
✕

ಐಪಿಎಲ್‌ ಶಾಸಕರಿಗೆ ತಲಾ 5ಟಿಕೆಟ್‌, ಇದಕ್ಕೆ ನನ್ನ ಬೆಂಬಲವಿಲ್ಲ

Sampriya
ಶುಕ್ರವಾರ, 27 ಮಾರ್ಚ್ 2026 (17:43 IST)
ಬೆಂಗಳೂರು: ಐಪಿಎಲ್ ಕ್ರಿಕೆಟ್‌ ನೋಡಲು ಶಾಸಕರಿಗೆ ತಲಾ ಐದು ಟಿಕೆಟ್ ನೀಡಬೇಕೆನ್ನುವುದಕ್ಕೆ ನನ್ನ ಬೆಂಬಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. 

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಕಾಂಗ್ರೆಸ್‌ನ ಕೆಲವು ಸದಸ್ಯರು ಶಾಸಕರಿಗೆ ತಲಾ 5 ಟಿಕೆಟ್‌ ನೀಡಬೇಕು, ಪಂದ್ಯ ವೀಕ್ಷಣೆಗೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಒತ್ತಾಯಿಸಿದ್ದರು. ಇದಕ್ಕೆ ಸಭಾಧ್ಯಕ್ಷ ಯುಟಿ ಖಾದರ್ ಕೂಡಾ ಬಲವಾಗಿ ಪ್ರತಿಪಾದಿಸಿದ್ದರು. 

ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, ಒಬ್ಬ ಶಾಸಕ, ಜನಪ್ರತಿನಿಧಿ ಜನ ಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತಾ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲವಿಲ್ಲ ಎಂದು ಹೇಳಿದರು. 

ಸದನದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ. ವೈಯಕ್ತಿಕವಾಗಿ ಅವರ ಹೇಳಿಕೆಗಳನ್ನು ಒಪ್ಪುವುದಿಲ್ಲ. ಜನಸಾಮಾನ್ಯರು ರಾಜಕಾರಣಿಗಳನ್ನು ಯಾವ ರೀತಿ ನೋಡುತ್ತಾರೆ ಎಂಬುದನ್ನು ಪತ್ರಿಕೆಗಳು ಮತ್ತು ಟಿ.ವಿಗಳಲ್ಲಿ ನೋಡುತ್ತಿದ್ದೇವೆ.

ಇನ್ನೂ ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11ಮಂದಿ ಸಾವನ್ನಪ್ಪಿದ್ದರು. ರಾಜ್ಯದ ಮತ್ತು ದೇಶದ ಜನರು ಅದನ್ನು ಮರೆತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಹೇಳಿಕೆಗಳು ಬೇಕಿತ್ತಾ, ನನಗಂತೂ ಅರ್ಥವಾಗುತ್ತಿಲ್ಲ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments