Select Your Language

Notifications

webdunia
webdunia
webdunia
webdunia

ಬಳ್ಳಾರಿಯಲ್ಲಿ 5 ವರ್ಷದ ಬಾಲಕ ಸಾವು: ಡೆಂಗ್ಯೂ ಶಂಕೆ

Karnataka Dengue Case

Sampriya

ಬಳ್ಳಾರಿ , ಭಾನುವಾರ, 29 ಸೆಪ್ಟಂಬರ್ 2024 (11:47 IST)
ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದು, ಇದೀಗ ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ 5 ವರ್ಷದ ಪ್ರದೀಪ್ ಆಚಾರಿ ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾನೆ. ಕೆಲ ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಕಳೆದ ಒಂದು ವಾರದಲ್ಲಿ ಸಿದ್ದಮ್ಮನ ಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ. ಇದೀಗ ಬಾಲಕ ಪ್ರದೀಪ್ ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಗ್ರಾಮದಲ್ಲಿ ಡೆಂಗ್ಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಗ್ರಾಮದಲ್ಲಿ, ಮನೆಗಳ ಸುತ್ತ ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಷನೆಂಬ ದೆವ್ವವನ್ನು ದೇವರು ಮಾಡುತ್ತಿದ್ದಾರೆ: ಪ್ರತಾಪ್ ಸಿಂಹ ಆಕ್ರೋಶ