ಇಡ್ಲಿ ಕೊಡಿಸುವುದಾಗಿ ಹೇಳಿ 5 ವರ್ಷದ ಬಾಲಕಿಯನ್ನು ರೇಪ್ ಮಾಡಿದ ವಿವಾಹಿತ

ಮಂಗಳವಾರ, 3 ಡಿಸೆಂಬರ್ 2019 (06:52 IST)
ಚಾಮರಾಜನಗರ : ವಿವಾಹಿತ ವ್ಯಕ್ತಿಯೊಬ್ಬ ಮನೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಗೆ ಇಡ್ಲಿ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದಿದೆ.ಬಸವರಾಜು(35) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ಬೆಳಿಗ್ಗೆ ಮಗು ಮನೆಯ ಹೊರಗೆ ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ಈತ ಮಗುವಿಗೆ ಇಡ್ಲಿ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಮನೆಗೆ ಬಂದ ಬಾಲಕಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೋಷಕರು ವಿಚಾರಿಸಿದಾಗ ಬಾಲಕಿ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣ ಪೋಷಕರು ರಾಮಾಪುರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ದೇವೇಂದ್ರ ಫಡ್ನವೀಸ್ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ಶಾಸಕ