Select Your Language

Notifications

webdunia
webdunia
webdunia
webdunia

50 ಸಾವಿರ ಸಾಲ ಮನ್ನಾ ಸಾಕಾಗುವುದಿಲ್ಲ: ಯಡಿಯೂರಪ್ಪ ಕಿಡಿ

50 ಸಾವಿರ ಸಾಲ ಮನ್ನಾ ಸಾಕಾಗುವುದಿಲ್ಲ: ಯಡಿಯೂರಪ್ಪ ಕಿಡಿ
ಬೆಂಗಳೂರು , ಬುಧವಾರ, 21 ಜೂನ್ 2017 (16:00 IST)
ನಮ್ಮ ಹೋರಾಟಕ್ಕೆ ಮಣಿದು ಸಾಲ ಮನ್ನಾ ಮಾಡಲಾಗಿದೆ. 50 ಸಾವಿರ ಸಾಲ ಮನ್ನಾ ಸಾಕಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಘೋಷಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, 50 ಸಾವಿರ ರೂಪಾಯಿ ಸಾಲ ಮನ್ನಾ ವೈಜ್ಞಾನಿಕವಲ್ಲ. ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
 
ಸಾಲದ ಮಿತಿಯನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಬೇಕು. ರಾಜ್ಯದಲ್ಲಿ ಅವಧಿಗೆ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಸಾಲ ಮನ್ನಾ ಮಾಡಲಾಗಿದೆ ಎಂದು ತಿರುಗೇಟು ನೀಡಿದರು.
 
ದೇಶದ ಇತರ ರಾಜ್ಯಗಳಲ್ಲಿ 1-2 ಲಕ್ಷ ರೂಪಾಯಿಗಳವರೆಗೆ ರೈತರ ಸಾಲ ಮನ್ನಾ ಮಾಡಲಾಗಿದೆ. ರಾಜ್ಯ ಸರಕಾರವೂ ಕೂಡಾ ಸಂಪೂರ್ಣ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಒತ್ತಾಯಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇಲ್ರೀ, ನಮ್ಮ ಒತ್ತಡದಿಂದಲೇ ರೈತರ ಸಾಲ ಮನ್ನಾ ಆಗಿದ್ದು: ಶೆಟ್ಟರ್