Publish Date: Fri, 27 Aug 2021 (14:26 IST)
Updated Date: Fri, 27 Aug 2021 (14:29 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,658 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ ಶೇ.50ರಷ್ಟು ಮಂದಿ ಮೊದಲ ಡೋಜ್ ಲಸಿಕೆ ಪಡೆದವರಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,26,03,188ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಂದು ದಿನದಲ್ಲಿ 496 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,36,861ಕ್ಕೆ ಜಿಗಿತ ಕಂಡಿದೆ. ಇದೇ ವೇಳೆ 32,988 ಮಂದಿ ಗುಣಮುಖಿತರಾಗಿದ್ದು ಒಟ್ಟಾರೆ ಗುಣಮುಖಿತರ ಸಂಖ್ಯೆ 3,18,21,428ಕ್ಕೆ ಏರಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,44,899ಕ್ಕೆ ಮತ್ತೆ ಏರಿಕೆ ಕಂಡಿದೆ.