Webdunia - Bharat's app for daily news and videos

Install App

ರೆನ್ಯೂ ಪವರ್ ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ

Webdunia
ಮಂಗಳವಾರ, 24 ಮೇ 2022 (20:08 IST)
ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು  ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿ ಇ ಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ  ಉಪಸ್ಥಿತರಿದ್ದರು .
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments