Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ 507 ಕೊವಿಡ್ ಪ್ರಕರಣ ವರದಿ

covid

geetha

bangalore , ಗುರುವಾರ, 11 ಜನವರಿ 2024 (19:29 IST)
ಬೆಂಗಳೂರು-ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬುಧವಾರ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನಿನ್ನೆ ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರದಲ್ಲಿ ಚಡ್ಡಿ ಗ್ಯಾಂಗ್ ಪ್ರತ್ಯೇಕ್ಷ