Select Your Language

Notifications

webdunia
webdunia
webdunia
webdunia

52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯ ಸರಕಾರ ಒಪ್ಪಂದ

52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯ ಸರಕಾರ ಒಪ್ಪಂದ
bengaluru , ಬುಧವಾರ, 25 ಮೇ 2022 (22:14 IST)
ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ  2 ಮಹತ್ವದ ಕಂಪನಿಗಳ ಜತೆ ಒಟ್ಟು 52 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.
 
ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಇನ್ನೂ ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ‌ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ.
 
 ಕರ್ನಾಟಕಕ್ಕೆ ದಾವೋಸ್ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ. 
 ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ.
ಮೆ. ಲುಲು ಗ್ರೂಪ್  ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.
 
ಕರ್ನಾಟಕದಲ್ಲಿ  ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕಗಳನ್ನು ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ  ಎಂದು ಮುಖ್ಯಮಂತ್ರಿಗಳು ತಿಳಿಸಿದರು.
 
ಇದೇ ಸಂದರ್ಭದಲ್ಲಿ ನವೆಂಬರ್  ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಕಲಿಕಾ ಚೇತರಿಕಾ ಕಾರ್ಯಕ್ರಮ ವಿಫಲ