Publish Date: Sun, 26 Sep 2021 (21:41 IST)
Updated Date: Sun, 26 Sep 2021 (21:45 IST)
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಅಪಘಾತ ತಗ್ಗಿಸುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು ಶನಿವಾರ ಮಧ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ 52 ಪ್ರಕರಣ ದಾಖಲಿಸಿದ್ದಾರೆ.
ಕೋವಿಡ್ ಹಿನ್ನೆಲೆ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ತಪಾಸಣೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ನಗರದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿದ್ದರಿಂದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.