Webdunia - Bharat's app for daily news and videos

Install App

53ನೇ ವಸಂತಕ್ಕೆ ಕಾಲಿಟ್ಟ ಕುಮಾರಸ್ವಾಮಿ; ನೀವೂ ವಿಶ್‌ ಮಾಡಿ

Webdunia
ಶುಕ್ರವಾರ, 16 ಡಿಸೆಂಬರ್ 2011 (13:29 IST)
PR
ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಜೆಪಿ ನಗರದಲ್ಲಿರುವ ನಿವಾಸಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ಕುಮಾರಸ್ವಾಮಿಗೆ ಶುಭ ಹಾರೈಸಿದರು.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಹುಟ್ಟುಹಬ್ಬದ ಸಂಭ್ರದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ಅನಿತಾಕುಮಾರಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಕುಮಾರಸ್ವಾಮಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಬಿಜೆಪಿ ಶಾಸಕ ಶಂಕರಲಿಂಗೇಗೌಡ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಭೇಟಿ ಮಾಡಿ ಶುಭ ಹಾರೈಸಿದರು.

ರಾಜ್ಯದ ಜನತೆ ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಎಂದಿಗೂ ಧಕ್ಕೆ ಬಾರದಂತೆ ನಡೆದುಕೊಳ್ಳುತ್ತೇನೆ. ಈ ಹಿಂದೆ ಕೆಲವು ತಪ್ಪು ಮಾಡಿದ್ದು, ಅದರಿಂದ ನೊಂದು ಪಾಠ ಕಲಿತಿರುವುದಾಗಿ ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಹೇಳಿದರು.

ರಾಜ್ಯದ ವಿವಿಧೆಡೆ ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ, ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಿದರು. ಅದೇ ರೀತಿ ಗುಲ್ಬರ್ಗ, ಚನ್ನಪಟ್ಟಣ, ರಾಮನಗರದಲ್ಲಿಯೂ ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಸಂಭ್ರಮಂದಿಂದ ಆಚರಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments