Webdunia - Bharat's app for daily news and videos

Install App

ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ 6 ಮಂದಿ ಸಾವು!

Webdunia
ಮಂಗಳವಾರ, 29 ಆಗಸ್ಟ್ 2023 (07:18 IST)
ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ವಾಲಿಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕಮ್ಮಾಳೆ ಗೇಟ್ ಬಳಿ ನಡೆದಿದೆ.

ಬೆಂಗಳೂರಿನಲ್ಲಿ ಹೋಟೆಲ್ ನಡೆಸುತ್ತಿದ್ದ ಸ್ನೇಹಿತರು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಮಾದಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಗೆ ಡಿಕ್ಕಿಹೊಡೆದಿದೆ. 

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಗರಾಜು, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಕುಮಾರ್, ಗೋವಿಂದ, ಶಾಂತಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟಗಾಯಗಳಾಗಿವೆ. ಸಾತನೂರು ಪೊಲೀಸರು ಭೇಟಿ ನೀಡಿ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರತೆಗೆದಿದ್ದಾರೆ.

ಅಪಘಾತಕ್ಕೆ ಅತೀವೇಗವೇ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕನಕಪುರ ಹಾಗೂ ಮಳವಳ್ಳಿ ಮುಖ್ಯರಸ್ತೆಯಲ್ಲಿ ನಿತ್ಯ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು ಪೊಲೀಸರು ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments