ನಗರದ ಸದಾಶಿವನಗರ ಭಾಶ್ಯಮ್ ಸರ್ಕಲ್ ನಿಂದ ಮಲ್ಲೇಶ್ವರಂ 18th ಕ್ರಾಸ್ ವರೆಗೆ ಫ್ಲೈ ಓವರ್ ನಿರ್ಮಾಣಕ್ಕೆ ಕೊನೆಗೂ ಬಿಬಿಎಂಪಿ ಆಸಕ್ತಿ ತೋರಿದೆ. ಸಾಕಷ್ಟು ವಿಳಂಬದ ನಂತರ ಈ ಬಹುನಿರೀಕ್ಷಿತ 4 ಪಥದ ಮೇಲು ಸೇತುವೆ ನಿರ್ಮಾಣಕ್ಕೆ ಟೆಂಡರ್ ಕರೆದಿರುವ ಪಾಲಿಕೆ 60 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗೆ ಪ್ಲಾನ್ ಹಾಕಿಕೊಂಡಿದೆ. ಸ್ಯಾಂಕಿ ಟ್ಯಾಂಕ್ ಪಕ್ಕದ ರಸ್ತೆಯ ಮೇಲೆ ಹಾದು ಹೋಗುವ ಫ್ಲೈ ಓವರ್ ಯಶವಂತಪುರ ಕಡೆಗೆ ಸಾಗುವ ಮಲ್ಲೇಶ್ವರಂ 18th ಕ್ರಾಸ್ ನಲ್ಲಿ ಅಂತ್ಯವಾಗಲಿದೆ.
ಇನ್ನೂ ಫ್ಲೈ ಓವರ್ ವಿಶೇಷತೆಗಳನ್ನು ಹೊಂದಿರಲಿದೆ. ಸಂಪೂರ್ಣ ಪರಿಸರ ಸ್ನೇಹಿತ ಥೀಮ್ ನೊಂದಿಗೆ ಚಿಂತನೆ ನಡೆಸಲಾಗಿದೆ. ಪ್ರತಿದಿನ ಸುಮಾರು 9 ರಿಂದ 10 ಸಾವಿರ ವಾಹನಗಳು ಈ ಸೇತುವೆ ಮೂಲಕ ಹಾದು ಹೋಗಬಹುದು ಅಂದಾಜಿಸಲಾಗಿದೆ. ಹೊಸ ಮೇಲೇತುವೆ 560 ಮೀ ಉದ್ದ ಮತ್ತು 17 ಮೀ ಅಗಲವಿದೆ. ಬಿಬಿಎಂಪಿಯು ಸೇತುವೆಯ ಕೆಳಗೆ 590 ಮೀ ವಿಸ್ತರಿಸುವ ದ್ವಿಪಥ ರಸ್ತೆಗಳನ್ನು ಮತ್ತು 5.5 ಮೀ ಅಗಲದ ಸ್ಲಿಪ್ ರಸ್ತೆಗಳನ್ನು ನಿರ್ಮಿಸುತ್ತದೆ. ಪಾಲಿಕೆ 49.59 ಕೋಟಿ ಮೊತ್ತದ ಟೆಂಡರ್ ಕರೆದಿದೆ. ಉಳಿದ 10.31 ಕೋಟಿ ರೂ.ಗಳನ್ನು ಜಿಎಸ್ಟಿ ಮತ್ತು ತಯಾರಿಕೆಯಂತಹ ಹೆಚ್ಚುವರಿ ವೆಚ್ಚಗಳಿಗೆ ಕಾರಣವಾಗಿದೆ.
ಇನ್ನೂ ಯೋಜನೆಗಾಗಿ, ಕೆಲವು ಮರಗಳನ್ನು ಕೊಡಲಿ ಅಥವಾ ಸ್ಥಳಾಂತರಿಸಬೇಕಾಗುತ್ತದೆ ಎಂದು ಸಂಸ್ಥೆ ಗಮನಿಸಿದೆ. ಇದಕ್ಕೆ ಪರಿಸರ ಪ್ರೇಮಿಗಳಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆ ಸಹ ಇದೆ. ಕೆರೆ ಏರಿ ಕಟ್ಟೆಗೆ ತಾಗಿಕೊಂಡಿರುವ ಯೋಜನೆಗೆ ಸಂಬಂಧಿಸಿದಂತೆ ಬಿಬಿಎಂಪಿ ಕೆಟಿಸಿಡಿಎಯಿಂದ ಅನುಮೋದನೆ ಪಡೆಯಬೇಕಿದೆ. ಈ ಯೋಜನೆಗಾಗಿ ಬಿಬಿಎಂಪಿಯೂ ಒಂದಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ.