Webdunia - Bharat's app for daily news and videos

Install App

650 ಮಂದಿ ಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ

Webdunia
ಬುಧವಾರ, 9 ಫೆಬ್ರವರಿ 2022 (20:53 IST)
ಬೆಂಗಳೂರು:- ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ವತಿಯಿಂದ 2022ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಪಾಸಾಗಿ, ಸದಸ್ಯತ್ವ ಪಡೆದ ಸುಮಾರು 650 ಮಂದಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.
ಸಂಸ್ಥೆಯು ವರ್ಷಕ್ಕೆ ಎರಡು ಬಾರಿ ಸಿಎ ಪರೀಕ್ಷೆ ನಡೆಸುತ್ತದೆ. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸದಸ್ಯತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಲಾಗುವುದು. ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಯಾಗಿರಲಿಲ್ಲ.
ಈ ವೇಳೆ ಐಸಿಎಐ ಬೆಂಗಳೂರು ಘಟಕದ ಅಧ್ಯಕ್ಷ ಬಿ.ಟಿ. ಶೆಟ್ಟಿ ಮಾತನಾಡಿ, "ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಘಟಿಕೋತ್ಸವ ನಡೆದಿರಲಿಲ್ಲ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಆರು ವರ್ಷಗಳಿಂದ ಘಟಿಕೋತ್ಸವ ನಡೆದಿರಲಿಲ್ಲ. ಇದೀಗ 2022ನೇ ಸಾಲಿನ ಘಟಿಕೋತ್ಸವವನ್ನು ಮಾಡಿದ್ದೇವೆ. ಕೋವಿಡ್ ಪ್ರಮಾಣ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಘಟಿಕೋತ್ಸವ ಎಂದಿನಂತೆ ನಡೆಯಲಿದೆ ಎಂದರು.
ಐಸಿಎಐ ಮಾಜಿ ಅಧ್ಯಕ್ಷ ಕೆ. ರಘು ಮಾತನಾಡಿ, ನೂತನ ಅರ್ಹ 600-650 ಲೆಕ್ಕಪರಿಶೋಧಕರಿಗೆ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದೇವೆ. ಚಾರ್ಟಟ್ ಅಕೌಂಟೆಂಟ್ ಕೋರ್ಸ್ ಅತ್ಯಂತ ಬೇಡಿಕೆಯುಳ್ಳ ಹಾಗೂ ವಿಫುಲ ಉದ್ಯೋಗಾವಕಾಶಗಳನ್ನು ಒದಗಿಸುವ ಅತ್ಯುತ್ತಮ ಕೋರ್ಸ್ ಇದಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಷ್ಟ್ರ ಮತ್ತು ಹೊರರಾಷ್ಟ್ರಗಳಲ್ಲೂ ಉದ್ಯೋಗ ಹೊಂದಲು ಈ ಉದ್ಯಮ ಅತ್ಯಂತ ಬೇಡಿಕೆಯುಳ್ಳದ್ದಾಗಿದೆ. ಕೋರ್ಸ್ ಮಾಡ ಬಯಸುವವರು ಬೆಂಗಳೂರು ಐಸಿಎಐ ಸಂಸ್ಥೆಗೆ ಬಂದರೆ ಅಗತ್ಯ ಮಾಹಿತಿ ಸಿಗುತ್ತದೆ ಎಂದು ಸಿಎ ಮಾಡುವ ಆಸಕ್ತರಿಗೆ ತಿಳಿಸಿದರು. 
ಘಟಿಕೋತ್ಸವದ ಸಂಚಾಲಕ ಸಿಎ ದಯಾನಿವಾಸ್ ಶರ್ಮಾ ಮಾತನಾಡಿ, 2020-21 ಹಾಗೂ 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದೆ. ನಾನಾ ವಿದ್ಯಾರ್ಥಿಗಳು ಕುಟುಂಬ ಸಮೇತರಾಗಿ ಭಾಗವಹಿಸಿರುವುದು ಸಂತೋಷದ ಸಂಗತಿ ಎಂದರು. 
ಕಾರ್ಯಕ್ರಮದಲ್ಲಿ ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐಸಿಎಐ)ಯ ಸೆಂಟ್ರಲ್ ಕೌನ್ಸಿಲ್ ಸದಸ್ಯ ಕೋತಾ ಶ್ರೀನಿವಾಸ್, ಕಾರ್ಯದರ್ಶಿ ಎಸ್. ದಿವ್ಯಾ ಮತ್ತಿತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments