Webdunia - Bharat's app for daily news and videos

Install App

ಬೆಂಗಳೂರಿನ ನಮ್ಮ ಮೆಟ್ರೋಗೆ ಹೊಸ 7 ರೈಲುಗಳು

Webdunia
ಬುಧವಾರ, 8 ಡಿಸೆಂಬರ್ 2021 (20:44 IST)
ಬೆಂಗಳೂರು; ಶಿಘ್ರದಲ್ಲಿಯೇ ನಮ್ಮ ಮೆಟ್ರೋಗೆ 7 ಹೊಸ ರೈಲುಗಳು ಸೇರ್ಪಡೆಗೊಳ್ಳಲಿವೆ. ಪ್ರಸ್ತುತ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಒಟ್ಟು 50 ರೈಲುಗಳು ಸಂಚಾರ ನಡೆಸುತ್ತಿವೆ.
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಲ್) ಅತ್ಯಾಧುನಿಕ ಹೊಸ 7 ರೈಲುಗಳನ್ನು ನಿರ್ಮಾಣ ಮಾಡಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿರುವ ಆರ್‌ಡಿಎಸ್‌ಓ ಕಳೆದ ತಿಂಗಳು ಹೊರ ರೈಲಿನ ಪ್ರಾಯೋಗಿಕ ಪರೀಕ್ಷೆ ನಡೆಸಿತ್ತು.
7 ಹೊಸ ರೈಲುಗಳ ಸಂಚಾರಕ್ಕೆ ಆರ್‌ಡಿಎಸ್‌ಓ ಒಪ್ಪಿಗೆ ಕೊಟ್ಟಿದೆ. ಕೆಲವು ಬದಲಾವಣೆಗಳನ್ನು ಸೂಚಿಸಿದೆ. ಮುಂದಿನ ಹಂತದಲ್ಲಿ ಬಿಇಎಂಎಲ್ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಒಪ್ಪಿಗೆ ಪಡೆಯಬೇಕು. ಬಳಿಕ ರೈಲು ಸಂಚಾರ ಆರಂಭವಾಗಲಿದೆ.
ಬಿಎಂಆರ್‌ಸಿಎಲ್ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗದಲ್ಲಿ ಓಡಿಸಲು ಈ ರೈಲುಗಳನ್ನು ಖರೀದಿ ಮಾಡಿದೆ. ಈ ಮಾರ್ಗದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, 2022ರ ಅಂತ್ಯಕ್ಕೆ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ.
ಹೊಸ ರೈಲುಗಳು ಬಂದ ತಕ್ಷಣ ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿ ಎಂದು ಕಾಯುವುದಿಲ್ಲ. ಉತ್ತರ-ದಕ್ಷಿಣ ಕಾರಿಡಾರ್ ಮತ್ತು ಪೂರ್ವ ಪಶ್ಚಿಮ ಕಾರಿಡಾರ್‌ಗಳಲ್ಲಿ ಅವುಗಳನ್ನು ಓಡಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.
ನಗರದಲ್ಲಿ ಪರಿಶೀಲನೆ; ಲಕ್ನೋದಲ್ಲಿರುವ ಆರ್‌ಡಿಎಸ್‌ಓನ 14 ಅಧಿಕಾರಿಗಳ ತಂಡ ಅಕ್ಟೋಬರ್ 10 ರಿಂದ 27ರ ತನಕ ಬೆಂಗಳೂರಿನಲ್ಲಿ ಹೊಸ ರೈಲುಗಳ ಪರಿಶೀಲನೆ, ಪ್ರಾಯೋಗಿಕ ಸಂಚಾರ ನಡೆಸಿದೆ. ರೈಲಿನ ವೇಗ, ತುರ್ತು ಬ್ರೇಕ್‌ಗಳ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲನೆ ಪೂರ್ಣಗೊಳಿಸಿದೆ.
ಸಂಪಿಗೆ ರಸ್ತೆ-ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರಾತ್ರಿ 10 ರಿಂದ ಬೆಳಗ್ಗೆ 4.30ರ ತನಕ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ. ಒಟ್ಟು 5 ದಿನ ಪ್ರಾಯೋಗಿಕ ಸಂಚಾರ ನಿಗದಿಯಾಗಿತ್ತು. ಅವಧಿಗೂ ಮೊದಲೇ ಅದು ಪೂರ್ಣಗೊಂಡಿದ್ದು, ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments