Select Your Language

Notifications

webdunia
webdunia
webdunia
webdunia

ಭಾರೀ ಮಳೆಗೆ ಮನೆ ಕುಸಿದು ಬೆಳಗಾವಿಯಲ್ಲಿ 7 ಮಂದಿ ಸಾವು

ಭಾರೀ ಮಳೆಗೆ ಮನೆ ಕುಸಿದು ಬೆಳಗಾವಿಯಲ್ಲಿ 7 ಮಂದಿ ಸಾವು
ಬೆಳಗಾವಿ , ಗುರುವಾರ, 7 ಅಕ್ಟೋಬರ್ 2021 (08:22 IST)
ಬೆಳಗಾವಿ: ಭಾರೀ ಮಳೆಯಿಂದಾಗಿ ನಿನ್ನೆ ರಾತ್ರಿ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.


ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಇದೀಗ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಭರಣ ಪ್ರೀಯರಿಗೆ ಗುಡ್ ನ್ಯೂಸ್