Select Your Language

Notifications

webdunia
webdunia
webdunia
webdunia

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿರುವ ಚಿರತೆಗೂ 70ಗಂಟೆ ಕೆಲಸನಾ

Mysore Infoysys campus

Sampriya

ಮೈಸೂರು , ಗುರುವಾರ, 9 ಜನವರಿ 2025 (18:58 IST)
Photo Courtesy X
ಮೈಸೂರಿನ ಹೊರವಲಯದಲ್ಲಿರುವ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿಸೆಂಬರ್‌ 31 ರಂದು ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿರುವುದು ಗೊತ್ತಿರುವ ವಿಚಾರ. ಮುನ್ನೆಚ್ಚರಿಕೆ  ಹಿನ್ನೆಲೆ ಇನ್ಫೋಸಿಸ್‌ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸಂಸ್ಥೆ ಸೂಚಿಸಿದೆ. ಇದೀಗ ಈ ಸಂಬಂಧ ಸಾಮಾಜಿಕ ಜಾಲತಾಣಲದಲ್ಲಿ ಭಾರೀ ಟ್ರೋಲ್ ಆಗುತ್ತಿದೆ.

ಇನ್ಪೋಸಿಸ್ ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಂ ನೀಡಲು ಚಿರತೆಯಿಂದ ಮಾತ್ರ ಸಾಧ್ಯವಾಯಿತು ಎಂದು ನೆಟ್ಟಿಗರು ಬಗೆ ಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.

ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್‌, ಮೀಮ್ಸ್‌ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಅದಲ್ಲದೆ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಯುವಕರು ವಾರಕ್ಕೆ 70ಗಂಟೆಗಳ ಕಾಲ ದುಡಿಯಬೇಕೆಂಬ ಹೇಳಿಕೆಯನ್ನು ಮುಂದಿಟ್ಟು ಟ್ರೋಲ್ ಮಾಡಿದ್ದಾರೆ. ಈ ರೂಲ್ಸ್‌ ಜ್ಯೂನಿಯರ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿದ ಚಿರತೆಗೂ ಅನ್ವಯಿಸುತ್ತದೆ ಎಂದು ಟ್ರೋಲ್ ಮಾಡಿದ್ದಾರೆ.

ಮತ್ತೊಬ್ಬ ಇನ್ಪೋಸಿಸ್ ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್ ನೀಡಲು ಚಿರತೆಯಿಂದ ಮಾತ್ರ ಸಾಧ್ಯವಾಯಿತು ಎಂದು  ಕಾಮಿಡಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಂಡಿಪುರದಲ್ಲಿ ರಾತ್ರಿ ಎರಡು ಬಸ್‌, ಆಂಬುಲೆನ್ಸ್ ಬಿಟ್ರೆ ಬೇರೆ ವಾಹನಕ್ಕೆ ನೋ ಎಂಟ್ರಿ