Publish Date: Thu, 13 Jul 2017 (19:10 IST)
Updated Date: Thu, 13 Jul 2017 (19:13 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ 70 ವರ್ಷ ವಯಸ್ಸಾಗಿದೆ. ಇನ್ನೂ ಮುಖ್ಯಮಂತ್ರಿಯಾಗೋಕೆ ಓಡಾಡ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸೂಗುರು ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ನುಡಿದಂತೆ ನಡೆದಿದೆ. ಆದ್ದರಿಂದ, ಮತ್ತೊಮ್ಮೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.
ಯಡಿಯೂರಪ್ಪ ಸಿಎಂ ಆಗೋಕೆ ಅವರಪ್ಪನಾಣೆಗೂ ಸಾಧ್ಯವಿಲ್ಲ. ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿ ತೇಲಾಡುವುದು ಬಿಡುವುದು ಒಳಿತು ಎಂದು ಲೇವಡಿ ಮಾಡಿದ್ದಾರೆ.
ಯಡಿಯೂರಪ್ಪ ಮಾತೆತ್ತಿದರೆ ಸೀರೆ ಕೊಟ್ಟೆ, ಸೈಕಲ್ ಕೊಟ್ಟೆ ಅಂತಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡದೇ ಜೈಲಿಗೆ ಹೋಗುವುದರಲ್ಲಿಯೇ ಬಿಜೆಪಿ ನಾಯಕರು ಅಧಿಕಾರವಧಿ ಕಾಲ ಕಳೆದಿದ್ದಾರೆ ಎಂದು ತಿರುಗೇಟು ನೀಡಿದರು.
ಬರಗಾಲದ ಬಗ್ಗೆ ಚರ್ಚೆಯ ವೇಳೆಯಲ್ಲಿ ಬಿಜೆಪಿಯ ಮೂವರು ನಾಯಕರು ಸದನದಲ್ಲಿ ಬ್ಲ್ಯೂಫಿಲ್ಮ್ ನೋಡುತ್ತಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಅಸಭ್ಯ ಭಾಷೆ ಬಳಸುವ ಬಿಜೆಪಿಯವರಿಗೆ ಸಂಸ್ಕ್ರತಿಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.