Select Your Language

Notifications

webdunia
webdunia
webdunia
webdunia

4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!

4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!
ಬೆಂಗಳೂರು , ಮಂಗಳವಾರ, 28 ಫೆಬ್ರವರಿ 2023 (07:50 IST)
ಬೆಂಗಳೂರು : ಆನ್ಲೈನ್ ವ್ಯವಹಾರ ಹೆಚ್ಚಿದಂತೆ ಸೈಬರ್ ವಂಚಕರ ಜಾಲ ಬೃಹತ್ತಾಗಿ ಬೆಳೆದಿದ್ದು, ನೇರವಾಗಿ ಗ್ರಾಹಕರ ಖಾತೆಗೆ ಕನ್ನ ಹಾಕುವ ಕೆಲಸ ನಡೆಯುತ್ತಿದೆ.
 
ಹಾಗೆಯೇ 2019 ರಿಂದ 2023ರ ವರೆಗೆ ಸೈಬರ್ ಅಪರಾಧಗಳ ಅಡಿಯಲ್ಲಿ ಬರೋಬ್ಬರಿ 722 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿದ್ದು, 722 ಕೋಟಿ ರೂ. ನಷ್ಟವಾಗಿದೆ ಎಂಬ ಅಂಕಿ-ಅಂಶ ಇಲಾಖೆ ಬಿಡುಗಡೆ ಮಾಡಿದೆ.

ಅದರಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಪೊಲೀಸರು ಸಂಗ್ರಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸೈಬರ್ ಅಪರಾಧಗಳಿಂದ ಎಚ್ಚರ ವಹಿಸುವಂತೆ ವಿಶೇಷ ಕೈಪಿಡಿ ಸಿದ್ಧಪಡಿಸಿದ್ದು, ಯುವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರದಲ್ಲಿ ಭೂಕಂಪನದ ಅನುಭವ