Select Your Language

Notifications

webdunia
webdunia
webdunia
webdunia

ಜಲಪ್ರಳಯದ ಮಧ್ಯೆ ಸರಳವಾಗಿ 73ನೇ ಸ್ವಾತಂತ್ರ್ಯ ದಿನಾಚರಣೆ

ಜಲಪ್ರಳಯದ ಮಧ್ಯೆ ಸರಳವಾಗಿ 73ನೇ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರು , ಬುಧವಾರ, 14 ಆಗಸ್ಟ್ 2019 (18:33 IST)
73ನೇ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸರಕಾರ ತೆಗೆದುಕೊಂಡಿದೆ.
ಜಲಪ್ರಳಯದಿಂದ ತತ್ತರಿಸಿಹೊಗಿ ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸದಿರಲು ಸರಕಾರ ನಿರ್ಧರಿಸಿದೆ.
 
ರಾಜ್ಯದ ಬಹುತೇಕ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿಹೋಗಿವೆ. ಇನ್ನು ಸಚಿವ ಸಂಪುಟ ನೆನೆಗುದಿಗೆ ಬಿದ್ದಿರುವುದರಿಂದ ಆಯಾ ಜಿಲ್ಲೆಗಳ ಹೊಣೆಗಾರಿಕೆಯನ್ನು ಡಿಸಿಗಳಿಗೆ ವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಗರದ ಮಾಣಿಕ್ ಶಾ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದೆ
 
ನಾಳೆ ಮುಂಜಾನೆ 9.00 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಆಯಾ ಜಿಲ್ಲೆಗಳಿಂದ ಆಗಮಿಸಿರುವ ಕಲಾವಿದರು ತಮ್ಮ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಮಕ್ಕಳ ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ.
 
 ಪರೇಡ್‍ನಲ್ಲಿ ಕೆಎಸ್‍ಆರ್ ಪಿ, ಸ್ಕೌಟ್ಸ್, ಗೈಡ್ಸ್, ಎನ್‍ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನು ಒಳಗೊಂಡ ಕವಾಯತು ಮತ್ತು ಬ್ಯಾಂಡ್‍ನ ಒಟ್ಟು 34 ತುಕಡಿಗಳಲ್ಲಿ ಸುಮಾರು ಒಂದು ಸಾವಿಕರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಶಾಲಾ ಮಕ್ಕಳ ಒಟ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಸಾವಿರ ಮಕ್ಕಳು ಭಾಗವಹಿಸಲಿದ್ದಾರೆ.
 
 ರೈಲು ನಿಲ್ದಾಣ, ವಿಮಾನ ನಿಲ್ದಾಣ, ಸೇರಿದಂತೆ ಅಗತ್ಯವಾಗಿರುವ ಸ್ಥಳಗಳಲ್ಲಿ ರಕ್ಷಣೆ ಒದಗಿಸಲಾಗಿದೆ. ಮೈದಾನಕ್ಕೆ ಒಳಪ್ರವೇಶಿಸುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಲಾಗುವುದು. ಒಟ್ಟು 1906 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
 
ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ 50 ಸಿಸಿ ಕ್ಯಾಮೆರಾ, 4 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಭಾರಿ ಬಂದೋಬಸ್ತ್ ಮಧ್ಯೆ 73ನೇ ಸ್ವಾತಂತ್ರೋತ್ಸವ ದಿನಾಚರಣೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ನಲ್ಲಿ ಹಾಡು ಹಾಡಿದ ಭಾರತೀಯ ಗಾಯಕನಿಗೆ ಎಂಥಾ ಶಿಕ್ಷೆ