Webdunia - Bharat's app for daily news and videos

Install App

ಆನೆಗೆ ಕಬ್ಬು ನೀಡಿದ್ದಕ್ಕೆ 75 ಸಾವಿರ ದಂಡ

Webdunia
ಮಂಗಳವಾರ, 6 ಡಿಸೆಂಬರ್ 2022 (18:04 IST)
ಆನೆಗಳಿಗೆ ಕಬ್ಬು ನೀಡಿದ್ದ ಲಾರಿ ಚಾಲಕನಿಗೆ ಬರೋಬ್ಬರಿ 75 ಸಾವಿರ ದಂಡ ಹಾಕಲಾಗಿದೆ. ದಾರಿಯಲ್ಲಿ ಅಡ್ಡಲಾಗಿ ಬರುವ ಆನೆಗೆ ಕಬ್ಬು ನೀಡಿ ಲಾರಿ ಚಾಲಕ 75 ಸಾವಿರ ದಂಡ ಹಾಕಿಸಿಕೊಂಡಿದ್ದಾನೆ. ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರು ಬಂದ ಗಜರಾಜನಿಗೆ ಲಾರಿ ಚಾಲಕ ಕಬ್ಬು ಕೊಟ್ಟಿದ್ದಾನೆ. ರಸ್ತೆ ಬದಿ ನಿಂತಿದ್ದ ಆನೆಗೆ ಕಬ್ಬಿನ ಕಂತೆಗಳನ್ನು ಎಸೆದಿದ್ದಾನೆ. ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಆಸನೂರು ಸಮೀಪ ಘಟನೆ ನಡೆದಿದೆ. ಇದನ್ನ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಕಂಡಿದ್ದಾರೆ. ಇದನ್ನು ಪೊಲೀಸರಿಗೆ ತಿಳಿಸಿದ್ದಾರೆ. ಚಾಲಕನ ಪೂರ್ವಾಪರ ವಿಚಾರಿಸಿ ಖಾಕಿ ಪಡೆ ಚಾಲಕನಿಗೆ  ದಂಡ ಹಾಕಿದ್ದಾರೆ. ಕಬ್ಬಿನ ರುಚಿಗಾಗಿ ಆನೆಗಳು ಲಾರಿಗಳನ್ನು ಅಡ್ಡ ಹಾಕಿ ಕಬ್ಬು ವಸೂಲಿ ಮಾಡುವುದು ಇಲ್ಲಿ ಸಾಮಾನ್ಯವಾಗಿದೆ. ಲಾರಿ ಚಾಲಕನೊಬ್ಬನಿಗೆ ಈ ಪರಿ ದಂಡ ವಿಧಿಸಿರುವುದು ಆಕ್ರೋಶಕ್ಕೂ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments