Publish Date: Thu, 15 Aug 2024 (10:46 IST)
Updated Date: Thu, 15 Aug 2024 (10:55 IST)
ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಯಿತು.
ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಿನ್ನೆಯೇ ಮಲ್ಲೇಶ್ವರದ ಬಿಜೆಪಿ ಕಚೇರಿಯನ್ನು ತ್ರಿವರ್ಣ ಧ್ವಜದ ಬಣ್ಣದ ದೀಪದಿಂದ ಅಲಂಕರಿಸಲಾಗಿತ್ತು. ಇಂದು ಬಿಜೆಪಿ ನಾಯಕರೆಲ್ಲರೂ ಕೇಂದ್ರ ಕಚೇರಿಗೆ ಬಂದು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ದಾಖಲೆಯ 11 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ದೇಶದ ಗಲ್ಲಿ ಗಲ್ಲಿಯಲ್ಲೂ ಇಂದು ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಅದೇ ರೀತಿ ಬಿಜೆಪಿ ಕಚೇರಿಯಲ್ಲೂ ಸ್ವಾತಂತ್ರ್ಯ ದಿನದ ಸಂಭ್ರಮಾಚರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಮಾಜಿ ಸಚಿವ ಭಗವಂತ ಖೂಬಾ, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಶ್ರೀಮತಿ ಭಾರತಿ ಶೆಟ್ಟಿ, ಪಿ.ಹೆಚ್. ಪೂಜಾರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.