Select Your Language

Notifications

webdunia
webdunia
webdunia
webdunia

7ನೇ ವೇತನ ಆಯೋಗದ ವರದಿ ಸಲ್ಲಿಕೆ: ಪರಿಶೀಲಿಸಿ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಬೆಂಗಳೂರು , ಶನಿವಾರ, 16 ಮಾರ್ಚ್ 2024 (22:11 IST)
Photo Courtesy Facebook
ಬೆಂಗಳೂರು:  ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಸರ್ಕಾರ ವರದಿಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
 
ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗ ಸಿದ್ಧ ಮಾಡಿದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿ ಮಾತನಾಡಿದರು. 
 
ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಿದ್ದೇನೆ ಎಂದರು. 
 
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಇದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕೃತವಾಗಿ ಬಿಜೆಪಿ ಸೇರಿದ ಪುತ್ತಿಲ ಪರಿವಾರ: ಗೊಂದಲಕ್ಕೆ ತೆರೆ ಎಳೆದ ಕೇಸರಿ ಪಡೆ