Publish Date: Mon, 25 Jul 2022 (20:10 IST)
Updated Date: Mon, 25 Jul 2022 (20:12 IST)
ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮುಂಜಾನೆ ಡಬಲ್ ಡೆಕ್ಕರ್ ಬಸ್‌ಗಳು ಡಿಕ್ಕಿ ಹೊಡೆದು, ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಡಬಲ್ ಡೆಕ್ಕರ್ ಬಸ್ಗಳೆರಡೂ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಈ ವೇಳೆ ಮುಂಜಾನೆ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದ ಬಳಿ ಈ ಭೀಕರ ಅಪಘಾತದ ಘಟನೆ ನಡೆದಿದೆ.