Select Your Language

Notifications

webdunia
webdunia
webdunia
webdunia

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಅತ್ಯಾಚಾರ
ಬೆಂಗಳೂರು : ನಗರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ.
 
ಬಾಲಕಿ ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಯುವಕ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನ ಪೊಲೀಸರು ನಡೆಸಲಿದ್ದಾರೆ.

ಬಾಲಕಿ ತಾಯಿ ಮಗಳನ್ನು ಬಿಟ್ಟು ಗಾಮೆಂಟ್ ಒಂದರಲ್ಲಿ ಕೆಲಸ ಮಾಡಲು ಹೋಗಿದ್ದರು. ಆಗ ಬಂಧಿತ ಆರೋಪಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೃತ್ಯ ಎಸಗಿದ್ದಾನೆ. ಮನೆಗೆ ಬಂದ ತಾಯಿಗೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಬಾಲಕಿ ತಾಯಿ ಮನೆಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಆದರೆ ದೂರಿನನ್ವಯ ಆರೋಪಿ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿನ್ನೆ ರಾತ್ರಿ ತಡವಾಗಿದ್ದ ಕಾರಣ ವೈದ್ಯಕೀಯ ಪರೀಕ್ಷೆ ನಡೆಸಲು ಆಗಿರಲಿಲ್ಲ. ಇಂದು ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳ್ಳುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೋಟ್ ಮಗುಚಿ ಮೀನುಗಾರರು ನಾಪತ್ತೆ!