ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬಹುತೇಕ ಪೂರ್ಣಗೊಂಡಿದ್ದು, ಪ್ರಸಕ್ತ ಸಾಲಿನ ನವೆಂಬರ್ ತಿಂಗಳ ಒಳಗಾಗಿ ಎಲ್ಲ ಕಾಮಕಾರಿಗಳ ಸಂಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಎಚ್.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿ ಮಂಡಳಿಗೆ ಕಳೆದ ಮೂರು ವರ್ಷಗಳಲ್ಲಿ ಬಿಡುಗಡೆಯಾದ 1080 ಕೋಟಿ ರೂಪಾಯಿ ಅನುದಾನ ಹಾಗೂ ಪ್ರಸಕ್ತ ಸಾಲಿನ ಮೊದಲ ಕಂತಿನಲ್ಲಿ ಬಿಡುಗಡೆಯಾದ 250 ಕೋಟಿ ರೂಪಾಯಿ ಅನುದಾನದಲ್ಲಿ ಇಲ್ಲಿಯವರೆಗೂ 800 ಕೋಟಿ ರೂಪಾಯಿ ಅನುದಾನವನ್ನು ಅಭಿವೃದ್ಧಿಗಾಗಿ ವೆಚ್ಚ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನದ ಹಣದಲ್ಲಿ 500 ಕೋಟಿ ರೂಪಾಯಿ ಹಣವನ್ನು ಮಾರ್ಚ್ ಅಂತ್ಯದೊಳಗೆ ಅಭಿವೃದ್ಧಿ ಕಾರ್ಯಗಳಿಗೆ ವೆಚ್ಚ ಮಾಡಲು ಸೂಚಿಸಲಾಗಿದ್ದು, ಇದಕ್ಕಾಗಿ ಸಂಬಂಧ ಪಟ್ಟ ಎಲ್ಲ ಅಧಿಕಾರಿಗಳಿಗೆ ಅನುದಾನದ ಹಣವನ್ನು ನೀಡಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ