Select Your Language

Notifications

webdunia
webdunia
webdunia
webdunia

85ನೇ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ

85ನೇ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ
ಕಲಬುರಗಿ , ಮಂಗಳವಾರ, 4 ಫೆಬ್ರವರಿ 2020 (18:48 IST)
ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ  5 ರಿಂದ 7 ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ.

ಸಮ್ಮೇಳನಾಧ್ಯಕ್ಷ  ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರ ಭವ್ಯ ಮೆರವಣಿಗೆಯ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 5 ರಂದು ಬೆಳಿಗ್ಗೆ 8.30 ಗಂಟೆಗೆ  ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಿಂದ ಆರಂಭಗೊಂಡ ಈ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಪಂಪ್ ನಿಂದ  ರಿಂಗ್ ರಸ್ತೆ ಮೂಲಕ ಕುಸನೂರ ರಸ್ತೆಯ ಮಾರ್ಗದಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದ ಪ್ರಧಾನ ವೇದಿಕೆಗೆ ಬಂದು ತಲುಪಲಿದೆ.  

ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಸಮ್ಮೇಳಾಧ್ಯಕ್ಷರ ಮೆರವಣಿಗೆಯನ್ನು ಉದ್ಘಾಟಿಸುವರು.


Share this Story:

Follow Webdunia kannada

ಮುಂದಿನ ಸುದ್ದಿ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಕ್ಷಣಗಣನೆ