Publish Date: Mon, 16 Nov 2020 (10:50 IST)
Updated Date: Mon, 16 Nov 2020 (10:51 IST)
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿದು 9 ಮಕ್ಕಳ ಬಾಳು ಕತ್ತಲಾಗಿದೆ. ನಗರದಲ್ಲಿ ನಿನ್ನೆ ದಿನ 9 ಮಕ್ಕಳು ಕಣ್ಣಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದಾರೆ.
ಪಟಾಕಿ ಸಿಡಿಸುವ ಸಂದರ್ಭದಲ್ಲಿ ಕಣ್ಣಿಗೆ ಗಾಯ ಮಾಡಿಕೊಂಡ ಮಕ್ಕಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವಿಶೇಷವೆಂದರೆ ಗಾಯಗೊಳಗಾದವರಲ್ಲಿ ಮಕ್ಕಳೇ ಹೆಚ್ಚು. ದೀಪಾವಳಿ ಸಂದರ್ಭದಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ಪ್ರತೀ ವರ್ಷವೂ ಗಾಯಾಳುಗಳಾಗಿ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ ಎನ್ನುವುದೇ ವಿಪರ್ಯಾಸ.