Publish Date: Fri, 22 Mar 2019 (11:41 IST)
Updated Date: Fri, 22 Mar 2019 (11:42 IST)
ಕ್ರೂಸರ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂಬತ್ತು ಜನ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಂಗಾವಿ ಸಮೀಪ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ.
ಮೃತಪಟ್ಟವರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಾಗರ (25), ಚಾಂದಬಾಷಾ(24), ಅಜಿಮ್ (26), ಅಂಬರೀಶ್ (32), ಶ್ರೀನಾಥ್ (30), ಯೂನುಸ್ (27) ಹಾಗೂ ಮಾಂಗಸಾಬ್ ಎಂದು ಗುರುತಿಸಲಾಗಿದೆ. ಗೋವಾ ಪ್ರವಾಸ ಮುಗಿಸಿ ವಾಪಸ್ ಬರುವಾಗ ರಾಷ್ಟ್ರೀಯ ಹೆದ್ದಾರಿ 218ರಲ್ಲಿನ ಚಿಕ್ಕ ಸಂಗಾವಿ ಬಳಿ ದುರ್ಘಟನೆ ಸಂಭವಿಸಿದೆ.
ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಮ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.