Select Your Language

Notifications

webdunia
webdunia
webdunia
webdunia

9 ಮಂದಿ ದುರ್ಮರಣ- ಬೆಳಗಾವಿಯಲ್ಲಿ ಭೀಕರ ಅಪಘಾತ.

9 ಮಂದಿ ದುರ್ಮರಣ- ಬೆಳಗಾವಿಯಲ್ಲಿ ಭೀಕರ ಅಪಘಾತ.
ಬೆಳಗಾವಿ , ಭಾನುವಾರ, 26 ಜೂನ್ 2022 (10:49 IST)
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತವಾಗಿದೆ. ಅಡಿಯಪ್ಪ ಚಿಲಭಾವಿ, ಬಸವರಾಜ್ ದಳವಿ, ಬಸವರಾಜ್ ಹನುಮನ್ನವರ್, ಆಕಾಶ್ ರಾಮಣ್ಣ ಗತ್ತಿ, ಫಕಿರಪ್ಪ ಹರಿಜನ, ಮಲಪ್ಪ ಸೇರಿ 9 ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಗೋಕಾಕ್ ತಾಲೂಕಿನ ದಾಸನಟ್ಟಿ, ಅಕ್ಕತಂಗೇರಹಾಳ, ಎಂ ಮಲ್ಲಾಪುರ ನಿವಾಸಿಗಳಾಗಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆಂದು ಹೊರಟಿದ್ದರು. ಆದರೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ 9 ಜನರ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಓವೈಸಿ ವ್ಯಂಗ್ಯ- ಇದು ಮಂಗಗಳ ನೃತ್ಯ .