Select Your Language

Notifications

webdunia
webdunia
webdunia
webdunia

9 ಸಾವಿರ ಗಿಡಗಳು ಆಕ್ರಮ ಗಣಿಗಾರಿಕೆಗೆ ನಾಶ

9 ಸಾವಿರ ಗಿಡಗಳು ಆಕ್ರಮ ಗಣಿಗಾರಿಕೆಗೆ ನಾಶ
kolara , ಶುಕ್ರವಾರ, 17 ಸೆಪ್ಟಂಬರ್ 2021 (21:18 IST)
ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇಹಳ್ಳಿಯಲ್ಲಿ 36 ಎಕರೆ ಗೋಮಾಳ ಜಮೀನಿನಲ್ಲಿ 9 ಸಾವಿರ ಗಿಡಗಳನ್ನು ಅಕ್ರಮ ಗಣಿಗಾರಿಕೆಗೆ ನಾಶಪಡಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ.
ಮಾಲೂರು ನಿವಾಸಿ ರವೀಂದ್ರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಸತೀಶ್​​​ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪೀಠ ತನ್ನ ಆದೇಶದಲ್ಲಿ, ಅರಣ್ಯ ಇಲಾಖೆಯು ಸರ್ಕಾರದ ಹಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗುಂಡೇಹಳ್ಳಿಯ ಸರ್ವೇ ನಂಬರ್ 66ರಲ್ಲಿನ 36 ಎಕರೆ 2 ಗುಂಟೆ ಗೋಮಾಳ ಜಮೀನಿನಲ್ಲಿ 1995ರಲ್ಲಿ ಒಟ್ಟು 9,500 ಗಿಡಗಳನ್ನು ನೆಟ್ಟಿತ್ತು. ನಂತರ ನಿರ್ವಹಣೆಗಾಗಿ ಬನಹಳ್ಳಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿತ್ತು. ಆದರೆ, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಎಲ್ಲ ಗಿಡಗಳನ್ನು ನಾಶಪಡಿಸಲಾಗಿದೆ. ಇದರಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಬನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ, ಅರಣ್ಯ ಪ್ರದೇಶವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿಲ್ಲ. ಆ ಜಾಗಕ್ಕೂ ಗ್ರಾಮ ಪಂಚಾಯತಿ ಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಇದೇ ವೇಳೆ, ಸರ್ಕಾರ ವ್ಯತಿರಿಕ್ತ ಹೇಳಿಕೆ ದಾಖಲಿಸಿದ್ದು, ಜಾಗದ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ್ದು, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಂಡಿದ್ದಾಗಿ ತಿಳಿಸಿದೆ.
ಆದ್ದರಿಂದ ಈ ಕುರಿತು ಲೋಕಾಯುಕ್ತ ತನಿಖೆ ಆದೇಶಿಸುವುದು ಸೂಕ್ತ ಎಂದು ಪೀಠ ಅಭಿಪ್ರಾಯಪಟ್ಟಿದೆ.  ಅಲ್ಲದೇ, ಪ್ರಕರಣ ಕುರಿತು ಲೋಕಾಯುಕ್ತ ಸಂಸ್ಥೆಯು ತನಿಖೆ ನಡೆಸಬೇಕು ಹಾಗೂ ತನಿಖೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಈ ಜಾಗದಲ್ಲಿ ಅರಣ್ಯ ಇಲಾಖೆಯು ಮತ್ತೆ ಆರು ತಿಂಗಳ ಒಳಗೆ ಗಿಡಗಳನ್ನು ನೆಡಬೇಕು. ಅಕ್ರಮ ಗಣಿಗಾರಿಕೆಯಿಂದ ಮತ್ತೆ ಗಿಡಗಳನ್ನು ನಾಶವಾಗದಂತೆ ನೋಡಿಕೊಳ್ಳಬೇಕು ಎಂದು ಪೀಠ ನಿರ್ದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ